ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಚಳಿಗಾಲದ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ನವೆಂಬರ್ 1ರಿಂದ ಮಹತ್ವದ ವಾಹನ ನಿರ್ಬಂಧ ಜಾರಿಗೆ ಬರಲಿದೆ. ಭಾರತ್ ಸ್ಟೇಜ್-6 (ಬಿಎಸ್-6) ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪೂರೈಸದ, ದೆಹಲಿಯ ಹೊರಗೆ ನೋಂದಣಿಯಾಗಿರುವ ವಾಹನಗಳಿಗೆ ರಾಜಧಾನಿ ಪ್ರವೇಶಿಸಲು ಅವಕಾಶ ಇರುವುದಿಲ್ಲ.