ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಏರಿಳಿತವಾಗುತ್ತಿರುವ ಈ ನಡುವೆ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ತೈಲ ಕಂಪನಿಗಳ ರಫ್ತಿನ ಮೇಲಿನ ವಿಂಡ್‌ಫಾಲ್ ತೆರಿಗೆಯನ್ನ (Windfall Tax) ಪರಿಷ್ಕರಿಸಿದ್ದು, ಪೆಟ್ರೋಲ್ ರಫ್ತಿನ ಮೇಲಿನ ಸುಂಕವನ್ನ ಹೆಚ್ಚಿಸಿದೆ ಹಾಗೂ ಡೀಸೆಲ್ ಮೇಲಿನ ಸುಂಕವನ್ನ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.