ವರನಟ ಡಾ. ರಾಜಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಅಣ್ಣಾವ್ರ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ಕಚ್ಚಾ ಬಾಂಬ್ ದಾಳಿಯ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ತಾಳವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.