ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಮತ್ತು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್​​ಡಿಕೆ, ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದಾರೆ. ಅಲ್ಲದೆ ಆ ಸಂಬಂಧ ಹಲವು ದಾಖಲೆಗಳನ್ನೂ ರಿಲೀಸ್​ ಮಾಡಿದ್ದಾರೆ.