ಬೆಂಗಳೂರು: ಜನಗಣತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ಮತ್ತು ಪಿಯುಸಿ (PUC) ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಹೀಗಾಗಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆಗೆ ಶಾಲಾ ಶಿಕ್ಷಣ ಇಲಾಖೆಗೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ಪತ್ರ ಬರೆದಿದೆ.