ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯು ವಿಶ್ವದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ ಲೋಪವನ್ನು ವಿರೋಧಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು.