ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೀಘ್ರದಲ್ಲೇ ಮಿಲಿಟರಿ ದಾಳಿ ನಡೆಸುವ ಸಾಧ್ಯತೆಯನ್ನು ತಳ್ಳಿಹಾಕಿಲ್ಲ. ಅದೇ ವೇಳೆ ಪರಿಸ್ಥಿತಿ ತಿಳಿಗೊಳಿಸಲು ರಾಜತಾಂತ್ರಿಕ ಶಾಂತಿ ಒಪ್ಪಂದದ ಆಯ್ಕೆಯೂ ಮುಕ್ತವಾಗಿದೆ ಎಂದು ತಿಳಿಸಿರುವುದು ಜಾಗತಿಕವಾಗಿ ಭಾರೀ ಚರ್ಚೆಗೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.