ಹಾಸನ: ಹಾಸನ್‌ ಎಂದಿರುವ ಜಿಲ್ಲೆಯ ಹೆಸರನ್ನು ಹಾಸನ ಎಂದು ಪರಿವರ್ತಿಸುವ ನಿಟ್ಟಿನಲ್ಲಿ ಅನುಮೋದನೆ ಪಡೆದು ಕಾರ್ಯ ರೂಪಕ್ಕೆ ತರಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹೇಳಿದ್ದಾರೆ.