ಬೆಂಗಳೂರು: ಕರ್ನಾಟಕದಲ್ಲಿ ಅರ್ಧ ಹೆಲ್ಮೆಟ್ ಗೆ ಅರ್ಧಚಂದ್ರ. ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್ ಅನ್ನು ಬಳಸುವಂತಿಲ್ಲ. ಈ ಅಸುರಕ್ಷಿತ ಅರ್ಧ ಹೆಲ್ಮೆಟ್ ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಅಂತಾ ಸಾರಿಗೆ‌ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.