ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಯುವಜನತೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ಜರಿ ಸಿಹಿಸುದ್ದಿಯೊಂದನ್ನ ನೀಡಿದೆ. ಇದುವರೆಗೂ ವಿವಿಧ ಇಲಾಖೆಗಳ ಸಮಾನಾಂತರ ಹುದ್ದೆಗಳಿಗೆ ಪ್ರತ್ಯೇಕ ಪರೀಕ್ಷೆಗಳನ್ನು ಬರೆದು ಹೈರಾಣಾಗುತ್ತಿದ್ದ ಅಭ್ಯರ್ಥಿಗಳ ಆರ್ಥಿಕ ಹಾಗೂ ಮಾನಸಿಕ ಹೊರೆ ತಪ್ಪಿಸಲು ಕೆಇಎ ಮಹತ್ವದ ಹೆಜ್ಜೆಯಿಟ್ಟಿದೆ.