ಪಾಕಿಸ್ತಾನವು ಅಫ್ಘಾನಿಸ್ತಾನದ 10 ಪ್ರಮುಖ ನೆಲೆಗಳ ಮೇಲೆ ವೈಮಾನಿಕ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಅಫ್ಘಾನ್ ಡ್ರೋನ್ ದಾಳಿಗಳಿಗೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನ ಹೇಳಿದೆ. ಟಿಟಿಪಿ ಉಗ್ರರ ಉಪಟಳ ಮತ್ತು ಗಡಿ ವಿವಾದದಿಂದ ಉಭಯ ದೇಶಗಳ ನಡುವಿನ ಸಂಘರ್ಷ ತೀವ್ರಗೊಂಡಿದೆ.