ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆ ಹಾಗೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.