ಬೆಂಗಳೂರು: 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ರೈತರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಈಗಾಗಲೇ ಮೊದಲ ಕಂತಿನಲ್ಲಿ ₹2,500 ಪರಿಹಾರ ನೀಡಿರುವ ಸರ್ಕಾರ, ಇದೀಗ ಎರಡನೇ ಕಂತಿನ ₹2,500 ಬಿಡುಗಡೆ ಮಾಡಲು ಅಧಿಕೃತ ಆದೇಶ ಹೊರಡಿಸಿದೆ.