ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಅಕ್ಟೋಬರ್ 13ರಂದು ನಡೆಯಲಿದೆ ಎಂದು ತಿಳಿದುಬಂದಿದೆ.