ಕರ್ನಾಟಕದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಈಚೆಗೆ ನಿಧಿ ಪತ್ತೆಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಭಾರೀ ಕುತೂಹಲವನ್ನೂ ಮೂಡಿಸಿತ್ತು. ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣ ಕಾರ್ಯಕ್ಕಾಗಿ ಅಡಿಪಾಯ ತೋಡುವ ಸಂದರ್ಭದಲ್ಲಿ ಚಿನ್ನದ ನಿಧಿ ಪತ್ತೆಯಾದ ಪ್ರಕರಣವು ಕರ್ನಾಟಕದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು.