ಗಾಯ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಜಿದ್ದಾಜಿದ್ದಿ ಮುಂದುವರಿದಿದೆ. ಕಳೆದ ಕೆಲವು ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಕಂಬ್ಯಾಕ್ ಮಾಡಲು ಭಾರತ 'ಎ' ತಂಡದ ಸರಣಿಯು ಅತ್ಯುತ್ತಮ ವೇದಿಕೆಯಾಗಿತ್ತು. ಆದರೆ, ಕ್ರಿಕೆಟ್ ಮೈದಾನಕ್ಕೆ ಮರಳುವ ಅವರ ಹಾದಿಗೆ ಮತ್ತೆ ಗಾಯದ ಸಮಸ್ಯೆಯೇ ಮುಳ್ಳಾಗಿ ಪರಿಣಮಿಸಿರುವುದು ನಿಜಕ್ಕೂ ವಿಪರ್ಯಾಸ.