ಗುಬ್ಬಿ ವೀರಣ್ಣನವರ ಮೊಮ್ಮಗಳು ಹಾಗೂ ಹಿರಿಯ ನಟಿ ಸುಂದರಶ್ರೀ ಅವರು ಕಳೆದ ಮೂರು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಇನ್‌ಸ್ಟಾಗ್ರಾಮ್ ಮೂಲಕ ಸಾರ್ವಜನಿಕರಲ್ಲಿ ಧನಸಹಾಯಕ್ಕಾಗಿ ಮನವಿ ಮಾಡಿದ್ದಾರೆ.