ತರೀಕೆರೆ: ಸಭೆಗಳಿಗೆ ಇಲಾಖಾ ಮುಖ್ಯಸ್ಥರೇ ಹಾಜರಾಗಿ, ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಮಾಹಿತಿ ನೀಡಬೇಕು. ಸಭೆಗೆ ಸಿಬ್ಬಂದಿಯನ್ನು ಕಳುಹಿಸಿದರೆ ಅವರಿಗೆ ಸಮಸ್ಯೆಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಬಳಿಕ ಇಲ್ಲಸಲ್ಲದ ಕಾರಣಗಳನ್ನು ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ಸೂಚಿಸಿದರು.