ಲವ್ಲಿ ಸ್ಟಾರ್ ಪ್ರೇಮ್ ಅವರ ಪುತ್ರಿ ಅಮೃತಾ ಅವರು ‘ಟಗರು ಪಲ್ಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಇದೀಗ ಅವರು ‘ಪಬ್ಬಾರ್’ ಸಿನಿಮಾನಲ್ಲಿ ನಟನೆ ಮಾಡಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಭಾಗಿ ಆಗಿದ್ದರು.