ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್​ಜಿಎ) ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಶುಕ್ರವಾರ ನಡೆಸಿದ ಭಾಷಣಕ್ಕೆ ಇಂದು ಭಾರತವು ‘ರೈಟ್ ಆಫ್ ರಿಪ್ಲೈ’ ಮೂಲಕ ಪ್ರತ್ಯುತ್ತರ ನೀಡಿದೆ. “ಗಡಿಯಾಚೆಗಿನ ಭಯೋತ್ಪಾದನೆ ಮುಂದುವರಿದರೆ ಪಾಕಿಸ್ತಾನ ತಕ್ಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಭಾರತ ಕಠಿಣ ಎಚ್ಚರಿಕೆ ರವಾನಿಸಿದೆ.