ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ ಇದೆ. ರಾಜ್ಯಾದ್ಯಂತ ಬಹುತೇಕ ಒಣಹವೆ ಮುಂದುವರಿಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ. ಈ ಹಿಂದೆ ಸುರಿದಿದ್ದ ಮಳೆಗೆ ಜಲಾಶಯಗಳಲ್ಲಿ ಜೀವಕಳೆ ಬಂದಿದ್ದು, ಆದರೆ ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ಮಾಯವಾಗಿದ್ದು, ರಾಜ್ಯದ ಪ್ರಮುಖ ಜಲಾಶಯಗಳು, ನದಿಗಳಲ್ಲಿ ಒಳಹರಿವು ಕಡಿಮೆ ಆಗಿದೆ.