ಹಾವೇರಿ: ಜಿಲ್ಲೆಯ ಕಬ್ಬು (Sugar Growers) ಬೆಳೆಗಾರರ ನಿರಂತರ ಹೋರಾಟಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ, ಕಬ್ಬು ದರ ನಿಗದಿ ಕುರಿತು ನಾಳೆ ಹಾವೇರಿಯ ದೇವಗಿರಿ ಬಳಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ನಿರ್ಣಾಯಕ ಸಭೆ ನಡೆಯಲಿದೆ. ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.