2047ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸಲು ಬೆಂಗಳೂರು ಮಹಾನಗರ ಪ್ರದೇಶದಲ್ಲಿ 9 ಸಮಗ್ರ ಕೈಗಾರಿಕಾ ಟೌನ್‌ಶಿಪ್‌ಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ 13,500 ಎಕರೆ ಭೂಮಿ ಗುರುತಿಸಲಾಗಿದ್ದು, ಬಿಡದಿಯಲ್ಲಿ ಎಐ ಸಿಟಿ, ಮೆಟ್ರೋ ವಿಸ್ತರಣೆ ಮತ್ತು ಉಪನಗರ ರೈಲು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.