ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ (Suvarna River) ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ. ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ.