ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಸಿನಿಮಾದ ಹಾಡುಗಳ ವಿರುದ್ಧ ಕೇಳಿಬರುತ್ತಿರುವ ಟೀಕೆಗಳಿಗೆ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ತಿರುಗೇಟು ನೀಡಿದ್ದಾರೆ. ಸಾರ್ವಜನಿಕರ ಟ್ರೋಲ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿರುವ ಅವರು, ಹ್ಯಾನ್ಸ್ ಜಿಮ್ಮರ್ ಜೊತೆಗಿನ ಒಡನಾಟದ ಬಗ್ಗೆಯೂ ಮಾತನಾಡಿದ್ದಾರೆ.