ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಯಾದರೂ ನೂತನ ಹಾಸ್ಟೆಲ್‌ಗಳ ನಿರ್ಮಾಣ ಹಾಗೂ ಹಾಲಿ ಹಾಸ್ಟೆಲ್‌ಗಳ ನವೀಕರಣ ಕಾಮಗಾರಿಗಳು ವಿಳಂಬವಾಗುತ್ತಿದೆ.