ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ (Fire Accident) ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆಯಲ್ಲಿದ್ದ ಗೃಹೋಪಯೋಗಿ ಉತ್ಪನ್ನಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.