ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ (Hindu Kush) ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ತಿಳಿಸಿದೆ. ಗುರುವಾರ (ಅ.1) ಮುಂಜಾನೆ 6:59ರ ಸುಮಾರಿಗೆ 5.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 126 ಕಿಲೋಮೀಟರ್ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ.