ಹಿರಿಯ ನಟ ದೇವರಾಜ್ ಅವರ ಮನೆಯಲ್ಲಿ ಶುಭ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ದೇವರಾಜ್ ಅವರ ಎರಡನೇ ಪುತ್ರ ಪ್ರಣಮ್ ದೇವರಾಜ್ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಗನ ವಿವಾಹದ ಸಲುವಾಗಿ ಎಲ್ಲ ಸೆಲೆಬ್ರಿಟಿಗಳಿಗೆ ಹಾಗೂ ವಿವಿಧ ಕ್ಷೇತ್ರದ ಗಣ್ಯರಿಗೆ ದೇವರಾಜ್ ಅವರು ಆಹ್ವಾನ ಪತ್ರಿಕೆ ನೀಡುತ್ತಿದ್ದಾರೆ.