ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ (Haveri Ganesh Festival) ಡಿಜೆ ಬಳಕೆಗೆ ಪೊಲೀಸರು ಅನುಮತಿ ನೀಡದಿದ್ದಕ್ಕೆ ಆಕ್ರೋಶಗೊಂಡ ಯುವಕರು, ವಿಸರ್ಜನಾ ಮೆರವಣಿಗೆಯನ್ನು ಅರ್ಧದಲ್ಲೇ ನಿಲ್ಲಿಸಿ ಗಣೇಶ ಮೂರ್ತಿಯನ್ನು ವಾಪಸ್ ತಂದು ಮರುಪ್ರತಿಷ್ಠಾಪನೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ.