ಕೂನೂರು: ಹಲವು ದಿನಗಳಿಂದ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ, ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಳ್ಳಲಿದೆ. ಇದೇ ಅಕ್ಟೋಬರ್ 26ರಂದು ಈ ವೈಪರೀತ್ಯವು ಇನ್ನಷ್ಟು ಚಂಡಮಾರುತವಾಗುವ ಸಾಧ್ಯತೆ ಇದೆ. ಈ ವೇಳೆ ದಕ್ಷಿಣ ಭಾರತದ ಕರಾವಳಿ ರಾಜ್ಯಗಳಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.