ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು (KSET Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಾಳೆ (ಭಾನುವಾರ) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಒಟ್ಟು 37 ವಿವಿಧ ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಗೆ 1,29,212 ಮಂದಿ ಅರ್ಜಿ ಸಲ್ಲಿಸಿದ್ದಾರೆ.