ಬೆಂಗಳೂರು: ಐಸ್ ಕ್ರೀಂ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಐಸ್ ಕ್ರೀಂ ತಯಾರಿಕಾ ಘಟಕಗಳ ಮೇಲೆ ಎಫ್‌ಡಿಎ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆ ಮೇರೆಗೆ ಸುಮಾರು 45 ಐಸ್ ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆದಿದೆ. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.