ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ಪ್ರೇಮದ ಊರಲಿ' ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾಗಿ 19 ದಿನಗಳನ್ನು ಪೂರೈಸಿರುವ ಈ ಚಿತ್ರವು ಒಟ್ಟು 67 ಕೋಟಿ ರೂಪಾಯಿಗಳಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಯಶಸ್ವಿ ಪ್ರದರ್ಶನ ಮುಂದುವರಿಸಿದೆ.