ನೆಲಮಂಗಲ: ಹಲವು ದಿನಗಳಿಂದ ರೈತರ ನಿದ್ದೆಗೆಡಿಸಿದ್ದ ಚಿರತೆ (leopard) ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ನೆಲಮಂಗಲ ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಡೆದಿದೆ. ಚಿರತೆ ಸೆರೆಯಾದ ಹಿನ್ನೆಲೆ ಈ ಪ್ರದೇಶದ ಸುತ್ತಮುತ್ತಲಿನ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.