ಧಾರವಾಡ: ಧಾರವಾಡದ (Dharwad) ಐನಾಕ್ಸ್ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನುಮಂತ ಅಣ್ಣಿಗೇರಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ, ಐನಾಕ್ಸ್ ಸಮೀಪದ ಖಾಲಿ ಜಾಗದಲ್ಲಿ ಮೃತದೇಹವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದರು.