ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಗಾಯಗೊಂಡ ಅರ್ಶದೀಪ್ ಸಿಂಗ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ 5ನೇ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಸರಣಿ 2-2ರಲ್ಲಿ ಸಮಬಲಗೊಂಡಿದ್ದು, ಬೆಂಗಳೂರಿನಲ್ಲಿ ಅಂತಿಮ ಪಂದ್ಯ ನಡೆಯಲಿದೆ.