ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದು, ದ್ವಿಪಕ್ಷೀಯ ವ್ಯಾಪಾರ, ರಕ್ಷಣೆ ಹಾಗೂ ಪ್ರಸ್ತುತ ಜಾಗತಿಕ ಮತ್ತು ಪ್ರಾದೇಶಿಕ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ. ಟ್ರಂಪ್ ಅವರೊಂದಿಗಿನ ಸಂಭಾಷಣೆಯನ್ನು ಅತ್ಯಂತ ‘ಫಲಪ್ರದ’ ಎಂದು ಮೋದಿ ಬಣ್ಣಿಸಿದ್ದಾರೆ.