ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದ್ದು, ನಂದಿನಿ ಹಾಲಿನ(Nandini Milik) ದರ ಏರಿಕೆ ಬಹುತೇಕ ನಿಶ್ಚಿತವಾಗಿದೆ. ಪ್ರತಿ ಲೀಟರ್ ಹಾಲಿನ ಬೆಲೆ 4 ರಿಂದ 5 ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. ಬೆಂಗಳೂರಿನ ಕರ್ನಾಟಕ ಹಾಲು ಮಹಾಮಂಡಳ (KMF) ಕಚೇರಿಯಲ್ಲಿ ಇಂದು ಮಹತ್ವದ ಸರ್ವಸದಸ್ಯರ ಸಭೆ ಜರುಗಿತು.