ಬೆಂಗಳೂರು: ಬಹುನಿರೀಕ್ಷೆಯ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಸಂಪರ್ಕ ಸಾಧಿಸುವ ಬೆಂಗಳೂರು SMVT- ಮುಂಬೈ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು (Bengaluru-Mumbai Sleeper Vande Bharat Express) ಸಂಚಾರಕ್ಕೆ ರೈಲ್ವೆ ಮಂಡಳಿಯು ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಎರಡು ರಾಜ್ಯಗಳ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯು ಗುಡ್‌ನ್ಯೂಸ್ ನೀಡಿದೆ.