ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Rain Effect) ಸಂಜೆ ವೇಳೆಗೆ ಭಾರೀ ಮಳೆ ಸುರಿದಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.