5ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಹೀನಾಯ ಸೋಲು ಅನುಭವಿಸಿದೆ. ಟಿಮ್ ಸೀಫರ್ಟ್ ಮತ್ತು ಗ್ಲೆನ್ ಫಿಲಿಪ್ಸ್ ಅವರ ಭರ್ಜರಿ ಆಟದಿಂದ ಕಿವೀಸ್ 192 ರನ್ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. ಸಂಜು ಸ್ಯಾಮ್ಸನ್ ಸೇರಿದಂತೆ ಐವರು ಆಟಗಾರರ ಕಳಪೆ ಪ್ರದರ್ಶನವೇ ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಗಿದೆ.