ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹವಾಮಾನದಲ್ಲಿ ಕೊಂಚ ಬದಲಾವಣೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆಯಿದೆ.