ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಎಲ್ಲೆಡೆ ಕಳೆಗಟ್ಟುತ್ತಿದ್ದು, ನಾಡಹಬ್ಬವನ್ನ ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.