3ನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನೀಡಿದ್ದ 199 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ವೇಳೆ ಅಭಿಷೇಕ್ ಶರ್ಮಾ ತಮ್ಮ 4ನೇ ಅಂತಾರಾಷ್ಟ್ರೀಯ ಶತಕ ಹಾಗೂ 11ನೇ ಟಿ20 ಶತಕ ಸಿಡಿಸಿದರು. ಈ ಮೂಲಕ ಭಾರತದ ಪರ 20 ಓವರ್​ಗಳ ಪಂದ್ಯದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ವಿಶ್ವದಾಖಲೆಯನ್ನ ತಮ್ಮ ಹೆಸರಿಗೆ ಬರೆದುಕೊಂಡರು.