ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರನ್ನ ಸಂಪರ್ಕಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ಅಮಿನ್ ಎಂಬ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಬಫೆಲೋ ವಿಂಗ್ಸ್ ಸಮೀಪ ಈ ಘಟನೆ ನಡೆದಿದ್ದು, ಆರೋಪಿಯನ್ನ ಬಳಿಕ ಕೆಐಎ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.