ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026-27ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದನ್ನ ಪ್ರಕಟಿಸಿದೆ. ಎರಡೂ ಬೋರ್ಡ್ ಪರೀಕ್ಷೆಗಳ (ಪರೀಕ್ಷೆ-1) ಅಂತಿಮ ವೇಳಾಪಟ್ಟಿಯನ್ನ ಮಂಡಳಿಯು ಗುರುವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.