Sonu Nigam: ಈ ವಿಷಯದ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ.ಟಿ.ಎ ಅವರು, ಗಾಯಕ ಸೋನು ನಿಗಮ್ ಇಂದು ನನ್ನೊಂದಿಗೆ ಮಾತಾಡಿದರು. ತಾವು ಹಿಂದೆ ಮಾಡಿದ ಒಂದು ಮಾತು ಕನ್ನಡಿಗರನ್ನು ಹೇಗೆ ನೋಯಿಸಿದೆ ಎಂಬುದು ಅವರಿಗೆ ಅರ್ಥವಾಗಿದೆ. ಬೇಷರತ್ತಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದರು.