ಕನ್ನಡ ರಾಜ್ಯೋತ್ಸವದ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಮ್ದಾರ್-ಷಾ ಹಾಗೂ ಮೋಹನ್ ದಾಸ್ ಪೈ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಆದರೆ, ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಮ್ಮೆಯ ಕನ್ನಡ ಮಣ್ಣಿನ ಮಗಳಾಗಿ, ಕರ್ನಾಟಕದ ಪ್ರತಿಯೊಬ್ಬರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ.