ಭಾರತ ಟೆಸ್ಟ್ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ, ಮುಂಬರುವ ನ್ಯೂಝಿಲೆಂಡ್ ಪ್ರವಾಸಕ್ಕೂ ಮುನ್ನ ದೇಶಿ ಕ್ರಿಕೆಟ್ ಅಖಾಡದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಟೀಮ್ ಇಂಡಿಯಾ ಎದುರಾಳಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.